ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌| 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

Update: 2024-08-30 10:49 GMT

Photo : X

ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ನಲ್ಲಿ ಚಿನ್ನದ ಪದಕ ಗೆದ್ದರು. ಆ ಮೂಲಕ ಸತತವಾಗಿ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಎರಡನೇ ಭಾರತೀಯ ಪ್ಯಾರಾ-ಅಥ್ಲೀಟ್ ಆಗಿದ್ದಾರೆ.

ಅವನಿ ಲೇಖರಾ ಅವರು ಟೋಕಿಯೊದಲ್ಲಿ ಗೆದ್ದಿದ್ದ ತಮ್ಮ ಚಿನ್ನದ ಪದಕವನ್ನು ಉಳಿಸಿಕೊಂಡಿದ್ದು ಮಾತ್ರವಲ್ಲ, ಅವರು ಶುಕ್ರವಾರದಂದು 249.7 ನೊಂದಿಗೆ ಮೂರು ವರ್ಷಗಳ ಹಿಂದೆ ಸ್ಥಾಪಿಸಿದ್ದ 249.6 ರ ಪ್ಯಾರಾಲಿಂಪಿಕ್ಸ್ ದಾಖಲೆಯನ್ನು ಸುಧಾರಿಸಿದರು.

11 ವರ್ಷದವರಿದ್ದಾಗ ಕಾರು ಅಪಘಾತದಲ್ಲಿ ಸೊಂಟದ ಕೆಳಗೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಗಾಲಿಕುರ್ಚಿಯಲ್ಲಿದ್ದ ಅವನಿ, 2021 ರಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಪದಕಗಳನ್ನು ಗೆದ್ದ ದೇಶದ ಮೊದಲ ಮಹಿಳಾ ಶೂಟರ್ ಆಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News