ಪಾಕಿಸ್ತಾನ ಕ್ರಿಕೆಟ್ ನಾಯಕತ್ವ ತೊರೆದ ಬಾಬರ್ ಅಝಮ್
Update: 2023-11-15 15:03 GMT
ಕರಾಚಿ : ಪಾಕಿಸ್ತಾನದ ಎಲ್ಲಾ ಮಾದರಿಯ ಕ್ರಿಕೆಟ್ ತಂಡದ ನಾಯಕತ್ವ ತೊರೆಯುವುದಾಗಿ ಪಾಕ್ ನಾಯಕ ಬಾಬರ್ ಅಝಮ್ ಘೋಷಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಧೀರ್ಘ ವಾಗಿ ಬರೆದುಕೊಂಡಿದ್ದಾರೆ. "ಇಂದು, ನಾನು ಪಾಕಿಸ್ತಾನದ ಎಲ್ಲಾ ಕ್ರಿಕೆಟ್ ಮಾದರಿಯ ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರವಾಗಿದ್ದರೂ, ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಎಲ್ಲಾ ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸಿ. ಈ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪಿಸಿಬಿಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ."