ಬಾಕ್ಸಿಂಗ್ ಡೇ ಟೆಸ್ಟ್: ಚೊಚ್ಚಲ ಪಂದ್ಯದಲ್ಲೇ ಕೊನ್‌ಸ್ಟಾಸ್ ಅರ್ಧಶತಕ
ಮೆಲ್ಬೋರ್ನ್: ಬಾರ್ಡರ್- ಗಾವಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್‌ನ ಆರಂಭದ ದಿನ ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆದಿದ್ದು, ಚೊಚ್ಚಲ ಪಂದ್ಯ ಆಡುತ್ತಿರುವ ಆರಂಭಿಕ ಆಟಗಾರ ಸ್ಯಾಮ್ ಕೊನ್‌ಸ್ಟಾಸ್ ಅರ್ಧಶತಕ ಗಳಿಸಿ ಗಮನ ಸೆಳೆದರು.
ಕೊನ್‌ಸ್ಟಾಸ್ 60 ರನ್‌ಗಳಾಗಿದ್ದಾಗ ರವೀಂದ್ರ ಜಡೇಜಾ ಅವರ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದರು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅತಿಥೇಯ ತಂಡ ಭೋಜನ ವಿರಾಮದ ವೇಳೆಗೆ ತಂಡ 25 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿತ್ತು. 38 ರನ್ ಗಳಿಸಿದ ಉಸ್ಮಾನ್ ಖ್ವಾಜಾ ಮತ್ತು 12 ರನ್ ಗಳಿಸಿದ ಮರ್ನುಸ್ ಲಂಬುಶೆಂಗ್ ಕ್ರೀಸ್‌ನಲ್ಲಿದ್ದರು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಉಭಯ ತಂಡಗಳಿಗೆ ಇದು ಮಹತ್ವದ ಪಂದ್ಯವಾಗಿದ್ದು, ಈ ಬಾಕ್ಸಿಂಗ್ ಡೇ ಟೆಸ್ಟ್ ಆರಂಭಕ್ಕೆ ಮುನ್ನ ಉಭಯ ತಂಡಗಳು ಸರಣಿಯಲ್ಲಿ 1-1 ಸಮಬಲ ಸಾಧಿಸಿವೆ. ಮೂರನೇ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡಿತ್ತು.
ಆಸ್ಟ್ರೇಲಿಯಾ ಪರ 19 ವರ್ಷದ ಕೊನ್‌ಸ್ಟಾಸ್ ಚೊಚ್ಚಲ ಪಂದ್ಯವನ್ನು ಆಡಿದ್ದು, ಆಸ್ಟ್ರೇಲಿಯಾ ಪರ ಟೆಸ್ಟ್ ಕ್ಯಾಪ್ ಪಡೆದ ನಾಲ್ಕನೇ ಕಿರಿಯ ಆಟಗಾರ ಎನಿಸಿಕೊಂಡರು.