ಯುವಜನರ ಭವಿಷ್ಯದ ಜೊತೆ ಚೆಲ್ಲಾಟಕ್ಕೆ ಕಾಂಗ್ರೆಸ್ ಅವಕಾಶ ನೀಡದು: ರಾಹುಲ್ ಗಾಂಧಿ

Update: 2024-03-05 17:32 GMT

ರಾಹುಲ್ ಗಾಂಧಿ | Photo: PTI 

ಹೊಸದಿಲ್ಲಿ : ಪ್ರಶ್ನೆಪತ್ರಿಕೆಗಳ ಸೋರಿಕೆಯಿಂದ ಯುವಜನರ ಭವಿಷ್ಯ ಶೋಚನೀಯವಾಗುತ್ತಿದೆಯೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದಕ್ಕೆ ತನ್ನ ಪಕ್ಷವು ಯಾರಿಗೂ ಅವಕಾಶ ನೀಡುವುದಿಲ್ಲ ಹಾಗೂ ಸರಕಾರಿ ಉದ್ಯೋಗಗಳಲ್ಲಿ ನೇಮಕಾತಿ ಪ್ರಕ್ರಿಯೆ ಪಾರದರ್ಶಕತೆಯನ್ನು ತರಲು ಸಮಗ್ರ ಯೋಜನೆಯನ್ನು ರೂಪಿಸಲಿದೆಯೆಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ

ಪ್ರಶ್ನೆ ಪತ್ರಿಕೆ ಸೋರಿಕೆಯು ಉತ್ತರಪ್ರದೇಶದ ಯುವಜನರಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಅಂಟಿದ ಶಾಪವಾಗಿದೆ ಎಂದು ಅವರು ಹಿಂದಿಯಲ್ಲಿ ಬರೆದ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದಾಗಿರುವುದನ್ನ್ನು ಅವರು ಪ್ರಸ್ತಾವಿಸಿದ್ದಾರೆ.

‘‘70ಕ್ಕೂ ಅಧಿಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು 2 ಕೋಟಿ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರುಗೊಳಿಸಿದೆ. ಯುವಜನರ ಭವಿಷ್ಯ ನಿರ್ಮಾಣದ ಅಮೂಲ್ಯವರ್ಷಗಳು ವ್ಯರ್ಥವಾಗಿವೆ. ಇದರಿಂದ ವಿದ್ಯಾರ್ಥಿಗಳ ಕುಟುಂಬಿಕರಿಗೂ ಆರ್ಥಿಕ ಹಾಗೂ ಮಾನಸಿಕ ಹೊರೆಯಾಗಿದೆ ’’ ಎಂದು ರಾಹುಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News