ವಿಶ್ವಕಪ್ ಅಭಿಯಾನಕ್ಕೂ ಮುನ್ನ ಭಾರತಕ್ಕೆ ಆಘಾತ: ಆಸೀಸ್ ಪಂದ್ಯಕ್ಕೆ ತಾರಾ ಬ್ಯಾಟರ್ ಅನುಮಾನ!
Update: 2023-10-06 06:08 GMT
ಚೆನ್ನೈ: ಅಕ್ಟೋಬರ್ 8 ರಂದು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿರುವ ಭಾರತ ತಂಡಕ್ಕೆ ಆಘಾತ ಎದುರಾಗಿದೆ.
ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅನಾರೋಗ್ಯಕ್ಕೆ ತುತ್ತಾಗಿದ್ದು, ರವಿವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ ಎನ್ನಲಾಗಿದೆ.
ಏಕದಿನ ಕ್ರಿಕೆಟ್ ರ್‍ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ಗಿಲ್ ಅವರು ಅಲಭ್ಯರಾದರೆ, ಇಶಾನ್ ಕಿಶನ್ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ.
ಗಿಲ್ ಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಡೆಂಗ್ಯೂ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ.