ಆಸ್ಟ್ರೇಲಿಯ ವಿರುದ್ಧ ಬೃಹತ್ ಗೆಲುವು: ಭಾರತದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಕನಸು ಜೀವಂತ

Update: 2024-11-25 16:16 IST
Photo of indian cricketers team

PC : PTI 

  • whatsapp icon

ಪರ್ತ್: ಇಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಬೃಹತ್ ಅಂತರದ ಗೆಲುವು ಸಾಧಿಸುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಕನಸನ್ನು ಜೀವಂತವಾಗಿ ಉಳಿಸಿಕೊಂಡಿದೆ. ಈ ಪಂದ್ಯದಲ್ಲಿನ ಗೆಲುವಿನ ಮೂಲಕ ಭಾರತ ತಂಡವು 61.11 ಸರಾಸರಿ ಅಂಕ ಗಳಿಕೆ ಮಾಡುವ ಮೂಲಕ ಮತ್ತೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಭಾರತ ತಂಡವು ತವರಿನಲ್ಲಿ 0-3 ಅಂತರದಲ್ಲಿ ಪ್ರವಾಸಿ ನ್ಯೂಝಿಲೆಂಡ್ ತಂಡದ ವಿರುದ್ಧ ಪರಾಭವಗೊಳ್ಳುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರ ಬೀಳುವ ಅಪಾಯವನ್ನು ಮೈಮೇಲೆ ಎಳೆದುಕೊಂಡಿತ್ತು. ಅಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸಬೇಕಿದ್ದರೆ, ಬಲಿಷ್ಠ ಆಸ್ಟ್ರೇಲಿಯ ತಂಡದ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ನಾಲ್ಕು ಟೆಸ್ಟ್ ಪಂದ್ಯಗಳನ್ನು ಅದರ ತವರಿನಲ್ಲೇ ಗೆಲ್ಲಬೇಕಾದ ಒತ್ತಡಕ್ಕೆ ಗುರಿಯಾಗಿತ್ತು. ಆದರೆ, ಆಸ್ಟ್ರೇಲಿಯ ತಂಡದ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಸಾಧಿಸಿರುವ ಪ್ರಚಂಡ ವಿಜಯದಿಂದ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಕನಸು ಇನ್ನೂ ಜೀವಂತವಾಗಿ ಉಳಿದಿದೆ.

ಸದ್ಯ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಭಾರತ ತಂಡ 61.11 ಸರಾಸರಿ ಅಂಕಗಳನ್ನು ಹೊಂದಿದ್ದರೆ, ಈ ಪಂದ್ಯದ ಸೋಲಿನೊಂದಿಗೆ ಎರಡನೆ ಸ್ಥಾನಕ್ಕೆ ಕುಸಿದಿರುವ ಆಸ್ಟ್ರೇಲಿಯ ತಂಡ 57.69 ಸರಾಸರಿ ಅಂಕ ಸಂಪಾದಿಸಿದೆ. ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಶ್ರೀಲಂಕಾ (55.56) ಹಾಗೂ ನ್ಯೂಝಿಲೆಂಡ್ (54.55) ಇವೆ. ದಕ್ಷಿಣ ಆಫ್ರಿಕಾ ತಂಡ ಕೂಡಾ 54.17 ಸರಾಸರಿ ಅಂಕಗಳೊಂದಿಗೆ ಐದನೆಯ ಸ್ಥಾನದಲ್ಲಿದೆ.

ಇಂದು ಮುಕ್ತಾಯಗೊಂಡ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವನ್ನು 295 ರನ್ ಗಳ ಬೃಹತ್ ಅಂತರದಿಂದ ಪರಾಭವಗೊಳಿಸುವ ಮೂಲಕ ಭಾರತ ತಂಡವು ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News