IML 2025 | ವೆಸ್ಟ್ ಇಂಡೀಸ್ ಮಾಸ್ಟರ್ಸ್ ಮಣಿಸಿ ಚಾಂಪಿಯನ್ ಆದ ಇಂಡಿಯಾ ಮಾಸ್ಟರ್ಸ್​

Update: 2025-03-17 00:11 IST
IML 2025 | ವೆಸ್ಟ್ ಇಂಡೀಸ್ ಮಾಸ್ಟರ್ಸ್ ಮಣಿಸಿ ಚಾಂಪಿಯನ್ ಆದ ಇಂಡಿಯಾ ಮಾಸ್ಟರ್ಸ್​

PC | @imlt20official

  • whatsapp icon

ರಾಯಪುರ : ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮಾಸ್ಟರ್ಸ್ ಲೀಗ್ ಟಿ 20 ಪಂದ್ಯಾವಳಿಯ ಫೈನಲ್‌ನಲ್ಲಿ ರವಿವಾರ ಭಾರತ ಮಾಸ್ಟರ್ಸ್ ತಂಡವು ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿದೆ.

ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 147 ರನ್ ಗಳಿಸಿತು. ಈ ಗುರಿ ಬೆನ್ನಟಿದ ಭಾರತ ಮಾಸ್ಟರ್ಸ್ ತಂಡವು 17 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತು.

ಈ ಗೆಲುವಿನೊಂದಿಗೆ ಭಾರತ ಮಾಸ್ಟರ್ಸ್ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ವಿನಯ್ ಕುಮಾರ್ 3 ವಿಕೆಟ್ ಪಡೆದರೆ, ಶಹಬಾಜ್ ನದೀಮ್ 2 ವಿಕೆಟ್, ಪವನ್ ನೇಗಿ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News