ಅಂತಿಮ ಟೆಸ್ಟ್: ಮತ್ತೊಮ್ಮೆ ಭಾರತದ ಬ್ಯಾಟರ್‌ಗಳ ವೈಫಲ್ಯ: 185 ರನ್‌ಗೆ ಆಲೌಟ್
ಸಿಡ್ನಿ: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯ ತಂಡಗಳ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡ 185 ರನ್‌ಗಳಿಗೆ ಆಲೌಟಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡದ ಬ್ಯಾಟರ್‌ಗಳು ಮತ್ತೊಮ್ಮೆ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರಿಸಿದರು. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (40) ಹೊರತುಪಡಿಸಿ ಮತ್ಯಾರಿಂದಲೂ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ.
ನಾಯಕ ರೋಹಿತ್ ಶರ್ಮ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಶುಭಮನ್ ಗಿಲ್ ಕೂಡಾ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲಗೊಂಡರು. ಅಲ್ಲದೆ, ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ದಾಖಲಿಸಿದ್ದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡಾ ಶೂನ್ಯಕ್ಕೆ ನಿರ್ಗಮಿಸಿದರು.
ಆಸ್ಟ್ರೇಲಿಯ ತಂಡದ ಪರ ಸ್ಕಾಟ್ ಬೋಲಂಡ್ ನಾಲ್ಕು ವಿಕೆಟ್ ಕಿತ್ತು ಯಶಸ್ವಿ ಬೌಲರ್ ಎನಿಸಿದರು. ಉಳಿದಂತೆ ಮಿಚೆಲ್ ಸ್ಟಾರ್ಕ್ ಮೂರು ವಿಕೆಟ್, ಪ್ಯಾಟ್ ಕಮಿನ್ಸ್ ಎರಡು ವಿಕೆಟ್ ಹಾಗೂ ನಥಾನ್ ಲಯಾನ್ ಒಂದು ವಿಕೆಟ್ ಗಳಿಸಿದರು.