ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ಅಶ್ವಿನ್‌ ಗೆ ಸ್ಥಾನ

Update: 2023-09-18 17:31 GMT

ಕೆ.ಎಲ್ ರಾಹುಲ್,ರೋಹಿತ್ ಶರ್ಮಾ | PHOTO: Twitter\ @BCCI

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. ವಿಶ್ವಕಪ್ ಗೆ ಮುಂಚಿತವಾಗಿ ನಡೆಯುವ ಸರಣಿಯಲ್ಲಿ ಆರ್ ಅಶ್ವಿನ್ ಗೆ ಸ್ಥಾನ ನೀಡಲಾಗಿದೆ.

ಮೊದಲೆರಡು ಪಂದ್ಯಗಳಿಗೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ. ಏಷ್ಯಾಕಪ್‌ ಗೆ ತಂಡಕ್ಕೆ ಮರಳಿದ್ದ ಕರ್ನಾಟಕದ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಅಂತಿಮ ಪಂದ್ಯಕ್ಕೆ ರೋಹಿತ್, ವಿರಾಟ್ ಹಾಗೂ ಪಾಂಡ್ಯ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಗಾಯಾಳು ಅಕ್ಷರ್ ಪಟೇಲ್ ಅವರನ್ನು ಫಿಟ್ ಇದ್ದರೆ ಕೊನೆಯ ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಏಕದಿನ ಸರಣಿ ವೇಳಾಪಟ್ಟಿ:

ಸೆ.22: ಮೊಹಾಲಿ

ಸೆ.24: ಇಂದೋರ್

ಸೆ.27: ರಾಜ್‌ಕೋಟ್

ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡ:

ಕೆ.ಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜ (ಉಪನಾಯಕ), ಋತುರಾಜ್ ಗಾಯಕವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್. ಅಶ್ವಿನ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ದ ಕೃಷ್ಣ.

ಅಂತಿಮ ಏಕದಿನಕ್ಕೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News