ವಿಶ್ವಕಪ್‌: ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್‌ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ

Update: 2023-10-14 08:12 GMT

Photo:X/@ICC

ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದ ಗಿಲ್ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

1992ರಿಂದ ಭಾರತ-ಪಾಕ್ ತಂಡಗಳು 7 ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಏಳು ಬಾರಿಯೂ ಜಯ ಸಾಧಿಸಿರುವ ಭಾರತವು ಅಜೇಯ ದಾಖಲೆಯನ್ನು ಉಳಿಸಿಕೊಂಡಿದೆ. ಆದರೆ ಈ ಎರಡು ದೇಶಗಳ ನಡುವಿನ ಸ್ಪರ್ಧೆಯು ಸಾಮಾಜಿಕ-ರಾಜಕೀಯ ಆಯಾಮವನ್ನು ಪಡೆದಿದ್ದು, ಇದು ಮೈದಾನದ ಹೊರಗೂ ಸದ್ದು ಮಾಡುತ್ತದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News