ವಿಶ್ವಕಪ್ ಸೆಮಿಫೈನಲ್: ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

Update: 2023-11-15 08:16 GMT

Photo:X/@ICC

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತ ತಂಡದ ನಾಯಕ ರೋಹಿತ್ ಶರ್ಮ ತವರು ರಾಜ್ಯ ಮಹಾರಾಷ್ಟ್ರದ ಮುಂಬೈ ನಲ್ಲಿಯೇ ಈ ಪಂದ್ಯ ನಡೆಯುತ್ತಿದೆ. 2019ರ ವಿಶ್ವಕಪ್ ಸೆಮಿಫೈನಲ್ ನಲ್ಲಿಯೂ ಭಾರತ ನ್ಯೂಝಿಲ್ಯಾಂಡ್ ಮುಖಾಮುಖಿ ಆಗಿತ್ತು.

ಈಗಾಗಲೇ 49 ಶತಕಗಳೊಂದಿಗೆ ಸಚಿನ್ ದಾಖಲೆ ಸರಿಗಟ್ಟಿರುವ ವಿರಾಟ್ ಕೊಹ್ಲಿ ತಮ್ಮ 50 ನೇ ಶತಕದ ನಿರೀಕ್ಷೆಯಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News