ವಿಶ್ವಕಪ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 2ನೇ ಗರಿಷ್ಠ ಸ್ಕೋರ್ ಗಳಿಸಿದ ಭಾರತ

Update: 2023-11-05 16:15 GMT

Photo: cricketworldcup.com

ಕೋಲ್ಕತಾ: ವಿಶ್ವಕಪ್ ಇತಿಹಾಸದಲ್ಲಿ ಪವರ್‌ಪ್ಲೇ ವೇಳೆ ಭಾರತವು ಎರಡನೇ ಗರಿಷ್ಠ ಸ್ಕೋರ್ ದಾಖಲಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತಾದ ಈಡನ್‌ಗಾರ್ಡನ್ಸ್‌ನಲ್ಲಿ ರವಿವಾರ ಈ ಸಾಧನೆ ಮಾಡಿದೆ.

ಭಾರತ ಮೊದಲ 10 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿ ಬಿರುಸಿನ ಆರಂಭ ಪಡೆಯಿತು. 24 ಎಸೆತಗಳಲ್ಲಿ 40 ರನ್ ಗಳಿಸಿದ ರೋಹಿತ್ ಶರ್ಮ ಭಾರತಕ್ಕೆ ಮಿಂಚಿನ ಆರಂಭ ನೀಡಿದರು. ಶುಭಮನ್ ಗಿಲ್ ಜೊತೆ ಮೊದಲ ವಿಕೆಟ್‌ಗೆ 62 ರನ್ ಜೊತೆಯಾಟ ನಡೆಸಿದರು.

ಕುತೂಹಲಕಾರಿ ಅಂಶವೆಂದರೆ ವಿಶ್ವಕಪ್‌ನಲ್ಲಿ ಅಗ್ರ ಐದು ಗರಿಷ್ಠ ಪವರ್ ಪ್ಲೇ ಮೊತ್ತವು ಸ್ವದೇಶದಲ್ಲಿ ದಾಖಲಾಗಿದೆ. ಭಾರತವು ಕೊನೆಯ ಬಾರಿ ವಿಶ್ವಕಪ್ ಆತಿಥ್ಯ ವಹಿಸಿರುವ 2011ರಲ್ಲಿ ಎರಡು ಬಾರಿ ಈ ಸಾಧನೆಯನ್ನು ಮಾಡಿತ್ತು. ಉಳಿದ ಮೂರು ಟಾಪ್ ಪವರ್ ಪ್ಲೇ ಸ್ಕೋರ್‌ಗಳು ಪ್ರಸಕ್ತ ವಿಶ್ವಕಪ್‌ನಲ್ಲಿ ದಾಖಲಾಗಿವೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಧರ್ಮಶಾಲಾದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಆಸ್ಟ್ರೇಲಿಯವು ಮೊದಲ 10 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 118 ರನ್ ಗಳಿಸಿತ್ತು. ಇದು ವಿಶ್ವಕಪ್‌ನಲ್ಲಿ ಪವರ್ ಪ್ಲೇ ವೇಳೆ ದಾಖಲಾದ ಗರಿಷ್ಠ ಮೊತ್ತವಾಗಿದೆ.

ಭಾರತವು ಇಂದು ಎಲ್ಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಪವರ್ ಪ್ಲೇ ವೇಳೆ ಜಂಟಿ ಮೂರನೇ ಗರಿಷ್ಠ ಸ್ಕೋರ್ ದಾಖಲಿಸಿತು. ಈ ಟೂರ್ನಮೆಂಟ್‌ನಲ್ಲಿ ಭಾರತವು ದಿಲ್ಲಿಯಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇ ವೇಳೆ ವಿಕೆಟ್ ನಷ್ಟವಿಲ್ಲದೆ 94 ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿತ್ತು. 2012ರಲ್ಲಿ ಹೊಬರ್ಟ್‌ನಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಮೊದಲ 10 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 97 ರನ್ ಗಳಿಸಿತ್ತು.

ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತದ ಗರಿಷ್ಠ ಪವರ್ ಪ್ಲೇ ಸ್ಕೋರ್

2023ರಲ್ಲಿ ಹೊಸದಿಲ್ಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ 94/0

2023ರಲ್ಲಿ ಕೋಲ್ಕತಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 91/1

2011ರಲ್ಲಿ ನಾಗ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 87/0

2011ರಲ್ಲಿ ಹೊಸದಿಲ್ಲಿಯಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ 82/3

2023ರಲ್ಲಿ ಅಹ್ಮದಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ 79/2

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News