ಪಾಕಿಸ್ತಾನದ ವಿರುದ್ಧ ಪಂದ್ಯಕ್ಕೆ ಭಾರತ ತಂಡ ಕೇಸರಿ ಬಣ್ಣದ ಜೆರ್ಸಿ ಧರಿಸುವುದಿಲ್ಲ: ಬಿಸಿಸಿಐ ಸ್ಪಷ್ಟನೆ

Update: 2023-10-09 18:01 GMT

Photo: thewire.com 

ಹೊಸದಿಲ್ಲಿ: ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ಅಕ್ಟೋಬರ್ 14ರಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯಕ್ಕಿಂತ ಮೊದಲು ಭಾರತ ಕ್ರಿಕೆಟ್ ತಂಡದ ಆಡುವ ಜೆರ್ಸಿಯಲ್ಲಿ ಬದಲಾವಣೆಯಾಗಲಿದೆ ಎಂಬ ಊಹಾಪೋಹ ಹರಡಿದೆ.

ಈ ವರದಿಗಳನ್ನು ತಳ್ಳಿ ಹಾಕಿರುವ ಬಿಸಿಸಿಐ ಖಜಾಂಚಿ ಆಶೀಶ್ ಶೆಲಾರ್, ‘‘ಭಾರತ ಕ್ರಿಕೆಟ್ ತಂಡವು ಐಸಿಸಿ ಕ್ರಿಕೆಟ್ ವಿಶ್ವಕಪ್-2023ರಲ್ಲಿ ನೀಲಿ ಬಣ್ಣದ ಜೆರ್ಸಿ ಧರಿಸಿಯೇ ಆಡಲಿದೆ’’ ಎಂದು ಹೇಳಿದರು.

ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಕೇಸರಿ ಬಣ್ಣದ ಜೆರ್ಸಿ ಧರಿಸಿ ಆಡಲಿದೆ ಎಂದು ಈ ಮೊದಲು ವದಂತಿ ಹಬ್ಬಿತ್ತು. ಇದಕ್ಕೆ ಪೂರಕವಾಗಿ ತರಬೇತಿಯ ಸಮಯದಲ್ಲಿ ಆಟಗಾರರು ಆರೆಂಜ್ ಜೆರ್ಸಿಯನ್ನು ಧರಿಸಿದ್ದರು. ರವಿವಾರ ಚೆನ್ನೈನ ಚಿದಂಬರಂ ಸ್ಟೇಡಿಯಂಲ್ಲಿ ನಡೆದ ಆಸ್ಟ್ರೇಲಿಯ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತವು ಎಂದಿನಂತೆ ನೀಲಿಬಣ್ಣದ ಜೆರ್ಸಿ ಧರಿಸಿ ಆಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News