INDvsNZ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ
ಧರ್ಮಶಾಲಾ: ಸತತ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿ ಅಜೇಯ ದಾಖಲೆ ಕಾಯ್ದುಕೊಂಡಿರುವ ಆತಿಥೇಯ ಭಾರತ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಇಂದು ಎಚ್‌ಪಿಸಿಎ ಸ್ಟೇಡಿಯಮ್‌ನಲ್ಲಿ ಮುಖಾಮುಖಿಯಾಗಲಿವೆ. ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.
ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ಈ ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡವನ್ನು ಸೇರಿಕೊಂಡಿದ್ದಾರೆ. ಶಾರ್ದೂಲ್ ಠಾಕೂರ್ ಬದಲು ಮುಹಮ್ಮದ್ ಶಮಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನ್ಯೂಝಿಲ್ಯಾಂಡ್‌ಗೆ ತಂಡವನ್ನು ನಾಯಕ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಹಂಗಾಮಿ ನಾಯಕ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಈ ಪಂದ್ಯದಲ್ಲಿನ ಗೆಲುವು ಉಭಯ ತಂಡಗಳನ್ನು ಸೆಮಿ ಫೈನಲ್‌ಗೆ ನಿಕಟವಾಗಿಸಲಿದೆ.
ಈ ಎರಡು ತಂಡಗಳು ಪ್ರಸಕ್ತ ಟೂರ್ನಿಯಲ್ಲಿ 4 ಪಂದ್ಯಗಳಲ್ಲಿ ಆಡಿದ್ದು, ಎಲ್ಲ 4 ಪಂದ್ಯಗಳಲ್ಲೂ ಜಯ ಸಾಧಿಸಿವೆ. ಉತ್ತಮ ರನ್‌ರೇಟ್ ಆಧಾರದಲ್ಲಿ ನ್ಯೂಝಿಲ್ಯಾಂಡ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.