ವಿಶ್ವಕಪ್ 2023: ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

Update: 2023-11-12 08:08 GMT

Photo credit: cricketworldcup.com

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ನಲ್ಲಿ ಅಜೇಯವಾಗಿ ಲೀಗ್ ಮುಗಿಸುವ ನಿರೀಕ್ಷೆಯಲ್ಲಿರುವ ಭಾರತ ತಂಡದ ಆಟ ನೋಡಲು ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಭಾರತವು ಸತತ 8 ಪಂದ್ಯಗಳಲ್ಲಿ ಜಯ ಸಾಧಿಸಿ ಈಗಾಗಲೇ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಸೆಮಿ ಫೈನಲ್ ಗೆ ಪ್ರವೇಶಿಸಿದೆ. ವೈಯಕ್ತಿಕ ಮೈಲಿಗಲ್ಲು ಹಾಗೂ ತಂಡದ ಗುರಿ ತಲುಪುವ ನಿಟ್ಟಿನಲ್ಲಿ ವಿಶ್ವಕಪ್ ನಲ್ಲಿ ಪ್ರತಿ ಪಂದ್ಯವೂ ಮುಖ್ಯವಾಗಿದೆ.

ಮತ್ತೊಂದೆಡೆ ನೆದರ್ಲ್ಯಾಂಡ್ಸ್ ತಂಡ 8 ಪಂದ್ಯಗಳಲ್ಲಿ ಕೇವಲ 2ರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಈ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 50ನೇ ಏಕದಿನ ಶತಕವನ್ನು ಬಾರಿಸಿ ಮಹತ್ವದ ಮೈಲಿಗಲ್ಲು ಸ್ಥಾಪಿಸುವತ್ತ ಚಿತ್ತ ಹರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News