ಐಪಿಎಲ್ 2024: ಲಕ್ನೋ ವಿರುದ್ಧ KKR ಗೆ ಭರ್ಜರಿ ಗೆಲುವು

Update: 2024-04-14 13:58 GMT

PC: X \ @IPL

ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಲಕ್ನೊ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 161 ರನ್ ಗಳನ್ನು ಕಲೆ ಹಾಕಲಷ್ಟೆ ಶಕ್ತವಾಯಿತು. ಈ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರ ಅಮೋಘ 89 ರನ್ (47 ಬಾಲ್) ಹಾಗೂ ಶ್ರೇಯಸ್ ಅಯ್ಯರ್ ಅವರ ತಾಳ್ಮೆಯ 38 ರನ್ (38 ಬಾಲ್) ನೆರವಿನಿಂದ ಇನ್ನೂ 26 ಬಾಲ್ ಗಳು ಬಾಕಿ ಇರುವಾಗಲೇ ಸುಲಭ ಗೆಲುವು ಸಾಧಿಸಿತು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News