ವಿಶ್ವಕಪ್ ನಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಬರೆದ ಮುಹಮ್ಮದ್ ಶಮಿ
ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಭಾರತೀಯ ವೇಗಿ ಮುಹಮ್ಮದ್ ಶಮಿ 5 ವಿಕೆಟ್ ಕಬಳಿಸುವುದರೊಂದಿಗೆ ಒಂದೇ ಋತುವಿನಲ್ಲಿ 2 ಐದು ವಿಕಟ್ ಜೊತೆಗೆ ಒಟ್ಟಾರೆ ಏಕದಿನ ವಿಶ್ವಕಪ್ ನಲ್ಲಿ ಮೂರು ಬಾರಿ ಐದು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಲ್ಲದೇ ವಿಶ್ವಕಪ್ ನಲ್ಲಿ ಭಾರತದ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದ ಮುಹಮ್ಮದ್ ಶಮಿ 14 ಪಂದ್ಯಗಳಿಂದ 45 ವಿಕೆಟ್ ಕಬಳಿಸಿದರು.
ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ನ್ಯೂಝಿಲ್ಯಾಂಡ್ ವಿರುದ್ಧ ಈ ಋತುವಿನ ಮೊದಲ ಐದು ವಿಕೆಟ್ ಪಡೆದರೆ ಇಂದು ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ತಮ್ಮ ಎರಡನೇ ಐದು ವಿಕೆಟ್ ಗೊಂಚಲು ಪಡೆದರು. ಇದಕ್ಕೂ ಮೊದಲು 2019 ರ ಏಕದಿನ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಐದು ವಿಕೆಟ್ ಪಡೆದಿದ್ದ ವೇಗಿ ಒಟ್ಟಾರೆ 14 ವಿಶ್ವಕಪ್ ಪಂದ್ಯಗಳಿಂದ 3 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದರು.
ಏಕದಿನ ವಿಶ್ವಕಪ್ನಲ್ಲಿ ಇದುವರೆಗೆ ಒಂದಕ್ಕಿಂತ ಹೆಚ್ಚು ಬಾರಿ ಯಾವುದೇ ಬೌಲರ್ ಐದಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ.