ಮೊದಲ ಟೆಸ್ಟ್‌ ನಲ್ಲಿ ಭಾರತಕ್ಕೆ 8 ವಿಕೆಟ್‌ಗಳ ಸೋಲು; 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದ ನ್ಯೂಝಿಲೆಂಡ್

Update: 2024-10-20 07:22 GMT

Photo: PTI

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತ ನೀಡಿದ 107 ರನ್‌ಗಳ ಸುಲಭ ಗುರಿ ಬೆನ್ನತ್ತಿದ ನ್ಯೂಝಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಮೂಲಕ ನ್ಯೂಝಿಲೆಂಡ್‌ ತಂಡವು 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಸಾಧನೆ ಮಾಡಿತು.

ಎರಡನೇ ಇನಿಂಗ್ಸ್‌ನಲ್ಲೂ ಉತ್ತಮ ಪ್ರದರ್ಶನ ತೋರಿದ ರಚಿನ್‌ ರವೀಂದ್ರ (ಅಜೇಯ 46 ರನ್) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಝಿಲೆಂಡ್ 1–0 ಅಂತರದ ಮುನ್ನಡೆ ಸಾಧಿಸಿದೆ.

ನ್ಯೂಝಿಲೆಂಡ್‌ ತಂಡವು 1988ರ ಬಳಿಕ ಭಾರತದ ನೆಲದಲ್ಲಿ ಯಾವುದೇ ಟೆಸ್ಟ್‌ ಗೆಲುವು ಸಾಧಿಸಿರಲಿಲ್ಲ.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News