ಪ್ಯಾರಿಸ್ ಒಲಿಂಪಿಕ್ಸ್ | ಕುಸ್ತಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಅಮನ್ ಸೆಹ್ರಾವತ್

Update: 2024-08-08 11:37 GMT

PC : X 

ಪ್ಯಾರಿಸ್: 57 ಕೆಜಿ ವಿಭಾಗದಲ್ಲಿ ಭಾರತೀಯ ಕುಸ್ತಿಪಟು ಅಮನ್ ಸೆಹ್ರಾವತ್ ಸೆಮಿಫೈನಲ್ ಪ್ರವೇಶಿಸಿದ್ದು, ಪದಕಕ್ಕೆ ಕೊರಳೊಡ್ಡಲು ಇನ್ನೊಂದೇ ಹೆಜ್ಜೆ ಬಾಕಿ ಇದೆ.

ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮನ್ ಅವರು ಮಾಜಿ ವಿಶ್ವ ಚಾಂಪಿಯನ್ ಅಲ್ಬೇನಿಯಾದ ಜೆಲಿಮ್‌ಖಾನ್ ಅಬಕರೊವ್ ವಿರುದ್ಧ 12-0 ಅಂತರದ ಗೆಲುವು ಸಾಧಿಸಿ ಸೆಮಿ ಪೈನಲ್‌ ಪ್ರವೇಶಿಸಿದ್ದಾರೆ.

ಈ ಮೊದಲ ಸುತ್ತಿನ ಪಂದ್ಯದಲ್ಲಿ ಅವರು ಉತ್ತರ ಮೆಸಿಡೋನಿಯಾದ ವ್ಲಾದಿಮಿರ್ ಎಗೊರೊವ್ ಅವರನ್ನು 10-0 ಅಂತರದಿಂದ ಸೋಲಿಸಿದ್ದರು.

75 ಕೆಜಿ ಮಹಿಳಾ ಕುಸ್ತಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮೆರಿಕಾದ ಹೆಲೆನ್ ಲೂಯಿಸ್ ಮರೌಲಿಸ್ ಎದುರು ಪರಾಭವಗೊಂಡ ಭಾರತೀಯ ಮಹಿಳಾ ಕುಸ್ತಿಪಟು ಅನ್ಶು, ತಮ್ಮ ಅದೃಷ್ಟ ಪರೀಕ್ಷೆಗಾಗಿ ರೆಪೆಚೇಜ್ ಸುತ್ತಿನಲ್ಲಿ ಪೈಪೋಟಿ ನಡೆಸಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News