ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಗೆ ಪ್ರಧಾನಿ ಸೇರಿದಂತೆ ಗಣ್ಯರ ಅಭಿನಂದನೆ

Update: 2024-07-28 16:07 GMT

ಮನು ಭಾಕರ್ ,  ಪ್ರಧಾನಿ ಮೋದಿ | PC : PTI 

ಹೊಸದಿಲ್ಲಿ : ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಜಯಿಸಿರುವ ಶೂಟರ್ ಮನು ಭಾಕರ್ ಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಶೂಟರ್ ಅಭಿನವ್ ಬಿಂದ್ರಾ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ  ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಕ್ಕಾಗಿ ಮನು ಭಾಕರ್ ಅವರಿಗೆ ಅಭಿನಂದನೆಗಳು. ಇದು ಐತಿಹಾಸಿಕ ಗೆಲುವಾಗಿದೆ. ಅಲ್ಲದೆ ಶೂಟಿಂಗ್ ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಭಾಕರ್ ಪಾತ್ರರಾಗಿದ್ದಾರೆ ಎಂದು ಹೇಳಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀ.ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಮನು ಭಾಕರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತವು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ. ಶೂಟಿಂಗ್ ನಲ್ಲಿ ಪದಕ ಗೆದ್ದ ದೇಶದ ಮೊದಲ ಮಹಿಳೆಯೂ ನೀವಾಗಿದ್ದೀರಿ. ನಿಮ್ಮ ಸಾಧನೆ ಅನೇಕ ಕ್ರೀಡಾಪಟುಗಳಿಗೆ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿ ನೀಡಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News