ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಆರ್.ಅಶ್ವಿನ್

Update: 2025-04-28 21:37 IST
R. Ashwin
  • whatsapp icon

ಹೊಸದಿಲ್ಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಿಸಿದರು.

ಅಶ್ವಿನ್ ಪ್ರಶಸ್ತಿ ಸ್ವೀಕರಿಸುತ್ತಿರುವ ವೀಡಿಯೊವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣಗಳ ನಂತರ ಪದ್ಮಶ್ರೀ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾಗಿದೆ.

ಕ್ರಿಕೆಟಿಗೆ ನೀಡಿರುವ ಅಮೋಘ ಕೊಡುಗೆಗಾಗಿ ಅಶ್ವಿನ್ ಈ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿದರು.

ಅಶ್ವಿನ್ 2011ರ ಏಕದಿನ ವಿಶ್ವಕಪ್ ಹಾಗೂ 2013ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.

ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 106 ಪಂದ್ಯಗಳಲ್ಲಿ ಒಟ್ಟು 537 ವಿಕೆಟ್ಗಳನ್ನು ಪಡೆದಿದ್ದು, ಭಾರತದ ಪರ ಟೆಸ್ಟ್ ಪಂದ್ಯದಲ್ಲಿ ಎರಡನೇ ಗರಿಷ್ಠ ವಿಕೆಟ್ಗಳನ್ನು ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ 6 ಶತಕಗಳ ಸಹಿತ ಒಟ್ಟು 3,503 ರನ್ ಗಳಿಸಿ ಆಲ್ ರೌಂಡರ್ ಸಾಮರ್ಥ್ಯ ಪ್ರದರ್ಶಿಸಿದ್ದರು.

ಅಶ್ವಿನ್ ಏಕದಿನ ಕ್ರಿಕೆಟ್ನಲ್ಲಿ 156 ವಿಕೆಟ್ ಹಾಗೂ ಟಿ20 ಪಂದ್ಯದಲ್ಲಿ 72 ವಿಕೆಟ್ಗಳನ್ನು ಪಡೆದಿದ್ದಾರೆ.

ಅಶ್ವಿನ್ ಕಳೆದ ವರ್ಷ ಮೆಲ್ಬರ್ನ್ನಲ್ಲಿ ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದಾರೆ. ಸದ್ಯ ಐಪಿಎಲ್ನಲ್ಲಿ ಸಿ ಎಸ್ ಕೆ ಪರ ಆಡುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News