2024 ರ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ : ಜಯ್ ಶಾ ಘೋಷಣೆ
ರಾಜ್‌ಕೋಟ್ : ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ಮತ್ತು ಯು ಎಸ್ ಎ ಯಲ್ಲಿ ಆಯೋಜಿಸಿರುವ 2024 ರ ಟಿ20 ವಿಶ್ವಕಪ್ ಯಲ್ಲಿ ಭಾಗವಹಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬುಧವಾರ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
"2023 ರ ವಿಶ್ವಕಪ್ ಫೈನಲ್ ನಲ್ಲಿ ಅಹಮದಾಬಾದ್‌ನಲ್ಲಿ, ನಾವು 10 ನೇರ ಗೆಲುವಿನ ನಂತರ ವಿಶ್ವಕಪ್ ಗೆಲ್ಲದಿದ್ದರೂ, ಹೃದಯಗಳನ್ನು ಗೆದ್ದಿದ್ದೇವೆ. 2024 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯುವ ಬಾರ್ಬಡೋಸ್‌ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ನಾವು ಭಾರತದ ಧ್ವಜವನ್ನು ಹಾರಿಸುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಜಯ್ ಷಾ ತಮ್ಮ ಭಾಷಣದ ಕೊನೆಯಲ್ಲಿ ಹೇಳಿದರು.
ಖಂಡೇರಿಯಲ್ಲಿರುವ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂಗೆ ಹಿರಿಯ ಕ್ರಿಕೆಟ್ ಆಡಳಿತಗಾರ ನಿರಂಜನ್ ಶಾ ಅವರ ಹೆಸರನ್ನು ಮರುನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ಜಯ್ ಷಾ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಭಾರತದ ಮಾಜಿ ನಾಯಕರಾದ ಸುನಿಲ್ ಗವಾಸ್ಕರ್ , ಅನಿಲ್ ಕುಂಬ್ಳೆ, ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಸೇರಿದಂತೆ ಹಲವಾರು ಗಣ್ಯರ ಮುಂದೆ ಜಯ್ ಶಾ ಈ ಘೋಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ಭಾರತ ಹಿರಿಯರ ತಂಡದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮಾ, ಮುಹಮ್ಮದ್ ಸಿರಾಜ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇದ್ದರು.