ದ್ವಿತೀಯ ಟೆಸ್ಟ್: ದಕ್ಷಿಣ ಆಫ್ರಿಕಾಕ್ಕೆ ಸೋಲುಣಿಸಿದ ಭಾರತ, ಸರಣಿ ಸಮಬಲ

Update: 2024-01-04 11:49 GMT

ಜಸ್ಪ್ರೀತ್ ಬುಮ್ರಾ | Photo: PTI 

ಕೇಪ್ಟೌನ್ : ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (6-61) ಅವರ ಅತ್ಯುತ್ತಮ ಬೌಲಿಂಗ್ ದಾಳಿಯ ನೆರವಿನಿಂದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್ಗಳ ಅಂತರದಿಂದ ಜಯ ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ.

ಎರಡನೇ ದಿನವಾದ ಗುರುವಾರ 3 ವಿಕೆಟ್ ನಷ್ಟಕ್ಕೆ 62 ರನ್ನಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕಾ ತಂಡ ಬುಮ್ರಾ ನೇತೃತ್ವದ ಬೌಲರ್ಗಳ ಶಿಸ್ತುಬದ್ಧ ದಾಳಿಗೆ ತತ್ತರಿಸಿ 36.5 ಓವರ್ಗಳಲ್ಲಿ 176 ರನ್ಗೆ ಆಲೌಟಾಯಿತು. ಭಾರತದ ಗೆಲುವಿಗೆ 79 ರನ್ ಗುರಿ ನೀಡಿತು.

ಭಾರತವು 12 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 80 ರನ್ ಗಳಿಸಿ ಇನ್ನೂ ಮೂರು ದಿನಗಳ ಆಟ ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿದೆ. ಯಶಸ್ವಿ ಜೈಸ್ವಾಲ್ 28 ರನ್, ರೋಹಿತ್ ಶರ್ಮಾ 17 ಎರಡಂಕೆಯ ಸ್ಕೋರ್ ಗಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News