ಸೆಹ್ವಾಗ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್

Update: 2024-02-24 14:07 GMT

ಸೆಹ್ವಾಗ್, ಜೈಸ್ವಾಲ್ | Photo : PTI

ರಾಂಚಿ : ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಶನಿವಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ 600 ರನ್ ಗಳಿಸಿದ ಐದನೇ ಭಾರತೀಯ ಎನಿಸಿಕೊಂಡರು. ಇದಲ್ಲದೇ, ಒಂದೇ ವರ್ಷದಲ್ಲಿ 23 ಸಿಕ್ಸರ್ ಸಿಡಿಸುವ ಮೂಲಕ ಮಾಜಿ ಕ್ರಿಕೆಟಿಗ ವೀರೆಂದ್ರ ಸೆಹ್ವಾಗ್ ಅವರ 16 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದರು. 2008 ರಲ್ಲಿ ವೀರೇಂದ್ರ ಸೆಹ್ವಾಗ್ 22 ಸಿಕ್ಸರ್ ಬಾರಿಸಿದ್ದರು ಎಂದು indiatoday.in ವರದಿ ಮಾಡಿದೆ.

ರಾಂಚಿಯ ಅಂತರರಾಷ್ಟೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಟದಲ್ಲಿ ಜೈಸ್ವಾಲ್ ಈ ಸಾಧನೆ ಮಾಡಿದರು. ಕಳೆದ ವರ್ಷ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಎಡಗೈ ಆಟಗಾರ ಜೈಸ್ವಾಲ್, ಪ್ರಸಕ್ತ ಐದು ಪಂದ್ಯಗಳ ಟೆಸ್ಟ್ ಸರಣಿಯ ಏಳನೇ ಇನ್ನಿಂಗ್ಸ್ ನಲ್ಲಿ ಈ ಮೈಲಿಗಲ್ಲು ಸಾಧಿಸಿದರು. ಇಂಗ್ಲೆಂಡ್ ಎಸೆತಗಾರ ಶುಐಬ್ ಬಷೀರ್ ಅವರ ಎಸೆತಕ್ಕೆ ಲಾಂಗ್ ಆನ್ ಗೆ ಸಿಕ್ಸರ್ ಬಾರಿಸುವ ಮೂಲಕ ಜೈಸ್ವಾಲ್ ಈ ದಾಖಲೆ ಬರೆದರು. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News