ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಶತಕ ; ಭಾರತ 260-3

Update: 2023-09-24 11:27 GMT

Shreyas, Shubman Gill | Photo: X \ @BCCI



ಇಂದೋರ್ : ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಎದುರಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಶತಕದ ನೆರವಿನಿಂದ ದೊಡ್ಡ ಮೊತ್ತ ಪೇರಿಸುವತ್ತ ದಾಪುಗಾಲಿಟ್ಟಿದೆ. 36 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 260 ರನ್ ಗಳಿಸಿದೆ.

ಕೇವಲ 86 ಎಸೆತಗಳಲ್ಲಿ ಸೆಂಚುರಿ ಬಾರಿಸಿದ ಶ್ರೇಯಸ್ ಅಯ್ಯರ್ ತಮ್ಮ ಬತ್ತಳಿಕೆಗೆ ಮತೊಂದು ಶತಕ ಸೇರಿಸಿಕೊಂಡರು. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅವರ ಮೂರನೇ ಶತಕ ದಾಖಲಾಯಿತು. 90 ಎಸೆತಗಳಲ್ಲಿ ಆಕರ್ಷಕ 11 ಬೌಂಡರಿ ಹಾಗೂ 3 ಸಿಕ್ಸರ್ ಗಳ ನೆರವಿನಿಂದ ಶತಕ ಬಾರಿಸಿ 105 ರನ್ ಗಳಿಸಿದ ಶ್ರೇಯಸ್ ಅಯ್ಯರ್ ತಮ್ಮ ಬಗೆಗಿದ್ದ ಅನುಮಾನಗಳನ್ನು ದೂರ ಸರಿಸಿದರು.

170 ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟಿಂಗ್ ಮಾಡಿದ ಅಯ್ಯರ್ ಕೇವಲ 20 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 34 ರನ್ ಗಳಿಸಿದಾಗ ಮಳೆಯು ಪಂದ್ಯವನ್ನು ಸ್ಥಗಿತಗೊಳಿಸಿತು. ಮತ್ತೆ ಪಂದ್ಯ ಆರಂಭವಾದಾಗ ಅವರು ಕೇವಲ 42 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ವಿಶ್ವಕಪ್‌ಗೆ ಕೆಲವೇ ದಿನಗಳು ಬಾಕಿಯಿದ್ದು, ಶ್ರೇಯಸ್ ಅಯ್ಯರ್ ತಮ್ಮ ಲಯಕ್ಕೆ ಮರಳುತ್ತಿರುವುದು ಭಾರತ ತಂಡದಲ್ಲಿ ಆಶಾಭಾವನೆ ಮೂಡಿಸಿದೆ.

97 ಎಸೆತಗಳಲ್ಲಿ 104 ರನ್ ಗಳಿಸುವ ಮೂಲಕ ಶುಭಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ 2 ನೇ ಶತಕವನ್ನು ಗಳಿಸಿದರು. ಆ ಮೂಲಕ ಒಂದೇ ವರ್ಷದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಶತಕ ಗಳಿಸಿದ ಬ್ಯಾಟರ್ಗಳ ಪಟ್ಟಿಗೆ ಸೇರಿಕೊಂಡರು. ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಈಗಾಗಲೇ ಈ ಪಟ್ಟಿಯಲ್ಲಿದ್ದಾರೆ. ಗಿಲ್ 2023 ರಲ್ಲಿ 6 ಶತಕಗಳನ್ನು ಗಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News