ಶ್ರೀಲಂಕಾ ವಿರುದ್ಧ ಬೃಹತ್ ಮೊತ್ತದತ್ತ ದಕ್ಷಿಣ ಆಫ್ರಿಕಾ, 2 ಶತಕ ದಾಖಲು

ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 4 ನೇ ಪಂದ್ಯ ಸೌತ್ ಆಫ್ರಿಕಾ ಹಾಗೂ ಶ್ರೀಲಂಕಾ ನಡುವೆ ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಶ್ರೀಲಂಕಾ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

Update: 2023-10-07 11:39 GMT

PHOTO : PTI

ಹೊಸದಿಲ್ಲಿ : ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 4 ನೇ ಪಂದ್ಯ ಸೌತ್ ಆಫ್ರಿಕಾ ಹಾಗೂ ಶ್ರೀಲಂಕಾ ನಡುವೆ ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಶ್ರೀಲಂಕಾ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಬಂದ ಸೌತ್ ಆಫ್ರಿಕಾ ತಂಡ ಉತ್ತಮ ಆರಂಭ ಪಡೆಯಲಿಲ್ಲ. ನಾಯಕ ಟೆಂಬ ಬವುಮ 8 ರನ್ ಗಳಿಸಿರುವಾಗ ದಿಲ್ಶಾನ್ ಮದುಶಂಕ ಎಲ್ ಬಿ ಡಬ್ಲ್ಯೂ ಆದರು. ನಂತರ ಜೊತೆಯಾದ ಬ್ಯಾಟರ್ ಗಳು ದ್ವಿಶತಕ ಜೊತೆಯಾಟ ದ ಮೂಲಕ ಡಿಕಾಕ್ ಶತಕ ಸಿಡಿಸಿ ಮತಿಷ ಪತಿರನ ಗೆ ವಿಕೆಟ್ ಒಪ್ಪಿಸಿದರು. ರಾಸ್ಸಿ ವ್ಯಾನ್ ಡರ್ ಡಸ್ಸೆನ್ 108 ಗಳಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಹೆನ್ರಿಚ್ ಕ್ಲಾಸನ್2 ರನ್, ಏಡನ್ ಮಾರ್ಕ್ರಂ 37 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

38 ಓವರ್ ಗಳಲ್ಲಿ ದಕ್ಷಿಣ ಆಫ್ರಿಕಾ 3 ವಿಕೆಟ್ ಕಳೆದುಕೊಂಡು 267 ರನ್ ಗಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News