ಅಮೆರಿಕದಲ್ಲಿ ಟಿ20 ವಿಶ್ವಕಪ್ ಆಯೋಜನೆ | ಐಸಿಸಿಗೆ 167 ಕೋಟಿ ರೂ. ನಷ್ಟ : ವರದಿ

Update: 2024-07-18 21:14 IST
ಅಮೆರಿಕದಲ್ಲಿ ಟಿ20 ವಿಶ್ವಕಪ್ ಆಯೋಜನೆ | ಐಸಿಸಿಗೆ 167 ಕೋಟಿ ರೂ. ನಷ್ಟ : ವರದಿ

PC : @icc

  • whatsapp icon

ಹೊಸದಿಲ್ಲಿ: ಅಮೆರಿಕದಲ್ಲಿ ಈ ವರ್ಷ ಟಿ20 ವಿಶ್ವಕಪ್ ಆಯೋಜಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಅಂದಾಜು 20 ಮಿಲಿಯನ್ ಅಮೆರಿಕನ್ ಡಾಲರ್(167 ಕೋಟಿ ರೂ.)ನಷ್ಟ ಅನುಭವಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಲಂಬೊದಲ್ಲಿ ಶುಕ್ರವಾರ ಆರಂಭವಾಗಲಿರುವ ಐಸಿಸಿ ವಾರ್ಷಿಕ ಸಮ್ಮೇಳನದಲ್ಲಿ ಇದು ಚರ್ಚೆಯ ಪ್ರಮುಖ ವಿಷಯವಾಗಿದೆ ಎಂದು ವರದಿ ತಿಳಿಸಿದೆ.

ವಾರ್ಷಿಕ ಸಾಮಾನ್ಯ ಸಭೆಯ(ಎಜಿಎಂ)9 ಅಂಶಗಳ ಕಾರ್ಯಸೂಚಿಯಲ್ಲಿ ಈ ವಿಷಯ ಒಳಗೊಂಡಿಲ್ಲ. ವಿಶ್ವಕಪ್ ನಂತರದ ವರದಿಯಲ್ಲಿ ಇದನ್ನು ಚರ್ಚಿಸಲಾಗುತ್ತದೆ.

ನ್ಯೂಯಾರ್ಕ್ನಲ್ಲಿ ನಡೆದಿದ್ದ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಸಹಿತ ಟಿ20 ಪಂದ್ಯಾವಳಿಯ ಹೆಚ್ಚಿನ ಪಂದ್ಯಗಳನ್ನು ಅಮೆರಿಕದಲ್ಲಿ ಆಯೋಜಿಸಲಾಗಿತ್ತು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಐಸಿಸಿ ಚೇರ್ಮನ್ ಗ್ರೆಗ್ ಬಾರ್ಕ್ಲೆ ಉತ್ತರಾಧಿಕಾರಿಯಾಗಿ ಆಯ್ಕೆಯಾಗುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಶಾ ಅವರು ವಿಶ್ವ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಅಧಿಕಾರ ವಹಿಸಲಿದ್ದಾರೆಯೇ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ ಎಂದು ಐಸಿಸಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News