ಟಿ20 ವಿಶ್ವಕಪ್‌: ಬಾಂಗ್ಲಾ ವಿರುದ್ಧ ಭಾರತಕ್ಕೆ 50 ರನ್‌ ಭರ್ಜರಿ ಜಯ

Update: 2024-06-22 23:41 IST
ಟಿ20 ವಿಶ್ವಕಪ್‌: ಬಾಂಗ್ಲಾ ವಿರುದ್ಧ ಭಾರತಕ್ಕೆ 50 ರನ್‌ ಭರ್ಜರಿ ಜಯ

Photo:X/BCCI

  • whatsapp icon

ನಾರ್ತ್‌ ಸೌಂಡ್‌: ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಸೂಪರ್‌-8 ಹಂತದಲ್ಲಿ ಸತತ 2ನೇ ಗೆಲುವು ದಾಖಲಿಸಿದ ಭಾರತ ಸೆಮಿಫೈನಲ್‌ ಹೊಸ್ತಿಲು ತಲುಪಿದೆ. ಶನಿವಾರ ಮಿಂಚಿನ ಬ್ಯಾಟಿಂಗ್‌ ಪ್ರದರ್ಶನ, ಮಾರಕ ಬೌಲಿಂಗ್‌ ದಾಳಿ ಮೂಲಕ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 50 ರನ್‌ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಸತತ 2ನೇ ಸೋಲು ಕಂಡ ಬಾಂಗ್ಲಾದೇಶ ಸೆಮೀಸ್‌ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

ಮೊದಲು ಬ್ಯಾಟ್‌ ಮಾಡಿದ ಭಾರತ, 5 ವಿಕೆಟ್‌ ಕಳೆದುಕೊಂಡು 196 ರನ್‌ ಕಲೆಹಾಕಿತು. ಬೃಹತ್‌ ಮೊತ್ತದ ಮುಂದೆ ಬಾಂಗ್ಲಾ ಬ್ಯಾಟರ್‌ಗಳಿಗೆ ಹೆಚ್ಚಿನ ಪ್ರತಿರೋಧ ತೋರಲು ಸಾಧ್ಯವಾಗಲಿಲ್ಲ. ತಂಡ 8 ವಿಕೆಟ್‌ಗೆ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು,

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News