ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತ | ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ತಮೀಮ್ ಇಕ್ಬಾಲ್ ಆಸ್ಪತ್ರೆಗೆ ದಾಖಲು

ತಮೀಮ್ ಇಕ್ಬಾಲ್ (Photo credit: X/@TamimOfficial28)
ಢಾಕಾ: ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತವಾಗಿದ್ದರಿಂದ ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ತಮೀಮ್ ಇಕ್ಬಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ನಡೆದ ದೇಶೀಯ ಕ್ರಿಕೆಟ್ ಪಂದ್ಯದ ವೇಳೆ ಈ ಘಟನೆ ನಡೆದಿದೆ. 36 ವರ್ಷದ ತಮೀಮ್ ಇಕ್ಬಾಲ್ ಅವರು ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ಅನ್ನು ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ನ 50 ಓವರ್ ಪಂದ್ಯದಲ್ಲಿ ಮುನ್ನಡೆಸುತ್ತಿದ್ದರು.
ತಮೀಮ್ ಟಾಸ್ ಚಿಮ್ಮಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು. ಬಳಿಕ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವ ಮೊದಲು ಅವರಿಗೆ ಮೈದಾನದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ತಮೀಮ್ 2007 ರಿಂದ 2023 ರವರೆಗೆ ಎಲ್ಲಾ ಸ್ವರೂಪದ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶದ ಪರವಾಗಿ 391 ಪಂದ್ಯಗಳನ್ನು ಆಡಿದ್ದಾರೆ.
ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಮೀಮ್ 15,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಎಲ್ಲಾ ಮೂರು ಅಂತರರಾಷ್ಟ್ರೀಯ ಕ್ರಿಕೆಟ್ ಸ್ವರೂಪಗಳಲ್ಲಿ ಶತಕಗಳನ್ನು ದಾಖಲಿಸಿದ ಏಕೈಕ ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಆಗಿ ಸಾಧನೆ ಮಾಡಿದ್ದಾರೆ.