ಬಾಂಗ್ಲಾದೇಶದಲ್ಲಿ ಹಿಂಸಾಚಾರ : ಮಹಿಳೆಯರ ಟಿ20 ವಿಶ್ವಕಪ್ ಕುರಿತು ಐಸಿಸಿ ಆತಂಕ

Update: 2024-07-22 15:54 GMT

PC : X 

ಹೊಸದಿಲ್ಲಿ : ಬಾಂಗ್ಲಾದೇಶದಲ್ಲಿ ಈಗ ನಡೆಯುತ್ತಿರುವ ಹಿಂಸಾಚಾರ ಘಟನೆಯು ಕೊಲಂಬೊದಲ್ಲಿ ವಾರ್ಷಿಕ ಸಮ್ಮೇಳನದಲ್ಲಿ ಭಾಗಿಯಾಗಿರುವ ಐಸಿಸಿ ಸದಸ್ಯರು ಹಾಗೂ ಮ್ಯಾನೇಜರ್‌ಗಳ ಗಮನ ಸೆಳೆದಿದೆ.

ಸರಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿಗೆ ಸಂಬಂಧಿಸಿದ ವಿವಾದಾತ್ಮಕ ನೀತಿ ವಿರೋಧಿಸಿ ವಿದ್ಯಾರ್ಥಿಗಳು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿರುವ ಕಾರಣ ಮುಂಬರುವ ಅಕ್ಟೋಬರ್ 3ರಿಂದ 20ರ ತನಕ ಬಾಂಗ್ಲಾದೇಶದಲ್ಲಿ ನಡೆಯಲಿರುವ ಮುಂಬರುವ ಮಹಿಳಾ ಟಿ20 ವಿಶ್ವಕಪ್ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ.

ನಾವು ನಿಕಟವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಆದರೆ ವಿಶ್ವಕಪ್‌ಗೆ ಇನ್ನೂ ಸಮಯವಿದೆ. ಮುಂದಿನ 24 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂದು ಐಸಿಸಿ ಮೂಲಗಳು ತಿಳಿಸಿವೆ.

ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು, 18 ದಿನಗಳ ಕಾಲ ಬಾಂಗ್ಲಾದೇಶದ ಎರಡು ಕ್ರೀಡಾಂಗಣಗಳಲ್ಲಿ 23 ಪಂದ್ಯಗಳು ನಡೆಯಲಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News