ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್ ಗೆ ವಿರಾಟ್ ಕೊಹ್ಲಿ ಅಲಭ್ಯ: ಬಿಸಿಸಿಐ

Update: 2024-01-22 15:52 GMT

ವಿರಾಟ್ ಕೊಹ್ಲಿ | Photo: X \ @BCCI 

ಹೊಸದಿಲ್ಲಿ : ಭಾರತದ ಬ್ಯಾಟಿಂಗ್ ಸ್ಟಾರ್ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ ಎಂದು ಬಿಸಿಸಿಐ ಸೋಮವಾರ ಬಹಿರಂಗಪಡಿಸಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಯಲ್ಲಿ ಈ ನಿರ್ಧಾರವನ್ನು ತಿಳಿಸಿದ್ದು, ಕೊಹ್ಲಿಯ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ವದಂತಿ ಹಬ್ಬಿಸದಂತೆ ಅಭಿಮಾನಿಗಳು ಹಾಗೂ ಮಾಧ್ಯಮವನ್ನು ವಿನಂತಿಸಿದರು.

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ತನ್ನನ್ನು ಪರಿಗಣಿಸದಂತೆ ಬಿಸಿಸಿಐಗೆ ವಿರಾಟ್ ಕೊಹ್ಲಿ ವಿನಂತಿಸಿದ್ದಾರೆ ಎಂದು ಶಾ ತಿಳಿಸಿದ್ದಾರೆ.

ಕೊಹ್ಲಿ ತನ್ನ ನಿರ್ಧಾರದ ಕುರಿತು ನಾಯಕ ರೋಹಿತ್ ಶರ್ಮಾ ಹಾಗೂ ಟೀಮ್ ಮ್ಯಾನೇಜ್ಮೆಂಟ್ನೊಂದಿಗೆ ಮಾತನಾಡಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ಅತ್ಯಂತ ಪ್ರಮುಖವಾಗಿರುತ್ತದೆ. ಕೆಲವೊಂದು ವೈಯಕ್ತಿಕ ಪರಿಸ್ಥಿತಿಯು ಕೊಹ್ಲಿ ಅವರ ಉಪಸ್ಥಿತಿಯನ್ನು ಬಯಸುತ್ತದೆ ಎಂದು ಬಿಸಿಸಿಐ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಬಿಸಿಸಿಐ ಆದಷ್ಟು ಬೇಗನೆ ವಿರಾಟ್ ಕೊಹ್ಲಿ ಅವರ ಬದಲಿ ಆಟಗಾರರನ್ನು ಪ್ರಕಟಿಸುವ ನಿರೀಕ್ಷೆ ಇದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯು ಜನವರಿ 25ರಿಂದ ಹೈದರಾಬಾದ್ನಲ್ಲಿ ಆರಂಭವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News