ಐಪಿಎಲ್ ಹರಾಜು ನಡೆಸುತ್ತಿರುವ ಮಲ್ಲಿಕಾ ಸಾಗರ್ ಯಾರು?; ಇಲ್ಲಿದೆ ಮಾಹಿತಿ...

Update: 2024-11-25 16:59 GMT

 ಮಲ್ಲಿಕಾ ಸಾಗರ್ | PC : X  

ಜಿದ್ದಾ: ಸೌದಿ ಅರೇಬಿಯಾದ ಜಿದ್ದಾದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) - 2025ರ ಮೆಗಾ ಹರಾಜು ಪ್ರಕ್ರಿಯೆ ನಡೆಸಿಕೊಟ್ಟ ಹರಾಜುಗಾರ್ತಿ ಮಲ್ಲಿಕಾ ಸಾಗರ್ ಕೂಡ ಎಲ್ಲರ ಗಮನ ಸೆಳೆದಿದ್ದಾರೆ.

ಮುಂಬೈ ಮೂಲದ ಮಲ್ಲಿಕಾ ಸಾಗರ್ ಫಿಲಡೆಲ್ಫಿಯಾದ ಬ್ರೈನ್ ಮಾವರ್ ಕಾಲೇಜಿನಲ್ಲಿ ಕಲಾ ಇತಿಹಾಸದಲ್ಲಿ ಪದವಿ ಪಡೆದಿದ್ದಾರೆ. ಜಗತ್ತಿನ ಶ್ರೇಷ್ಠ ಹರಾಜುಗಾರರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿರುವ ಮಲ್ಲಿಕಾ ಸಾಗರ್ ಕಲಾ ಸಂಗ್ರಾಹಕಿ ಮತ್ತು ಸಲಹೆಗಾರ್ತಿಯಾಗಿದ್ದಾರೆ. ಮಲ್ಲಿಕಾ ಸಾಗರ್ ಅವರಿಗೆ ಇದು ಮೊದಲ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲ. ಸತತ ಎರಡನೇ ಬಾರಿಗೆ ಐಪಿಎಲ್ ಹರಾಜನ್ನು ಅವರು ಮುನ್ನಡೆಸುತ್ತಿದ್ದಾರೆ.

2001ರಲ್ಲಿ ಅಂತಾರಾಷ್ಟ್ರೀಯ ಹರಾಜು ಸಂಸ್ಥೆಗಳಲ್ಲಿ ಒಂದಾದ ಕ್ರಿಸ್ಟಿಸ್ ನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಮಲ್ಲಿಕಾ ಸಾಗರ್ ಭಾರತೀಯ ಮೂಲದ ಮೊದಲ ಮಹಿಳಾ ಹರಾಜುಗಾರ್ತಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಮಲ್ಲಿಕಾ ಸಾಗರ್ ಹಲವಾರು ಮಹಿಳಾ ಪ್ರೀಮಿಯರ್ ಲೀಗ್ ಹರಾಜುಗಳ ನಿರ್ವಹಣೆ ಮಾಡಿದ್ದಾರೆ. 2021ರ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ಆಟಗಾರರ ಹರಾಜಿಗೆ ಇವರು ಹರಾಜು ವ್ಯವಸ್ಥಾಪಕರಾಗಿದ್ದರು.

2023ರಲ್ಲಿ ಟಿ20 ಲೀಗ್ ನ ಹರಾಜನ್ನು ನಡೆಸಿಕೊಡುವ ಮೂಲಕ ಈ ಹರಾಜು ಪ್ರಕ್ರಿಯೆ ನಡೆಸಿಕೊಟ್ಟ ಮೊದಲ ಭಾರತೀಯ ಹರಾಜುಗಾರ್ತಿ ಎಂಬ ಇತಿಹಾಸವನ್ನು ನಿರ್ಮಿಸಿದ್ದರು. ರಿಚರ್ಡ್ ಮ್ಯಾಡ್ಲಿ ಮತ್ತು ಹಗ್ ಎಡ್ಮೀಡ್ಸ್ ಐಪಿಎಲ್ ಹರಾಜುಗಳಲ್ಲಿ ಹೆಸರುಗಳಿಸಿದ್ದಾರೆ. ಆದರೆ ಮಲ್ಲಿಕಾ ಈ ಪ್ರತಿಷ್ಠಿತ ಕ್ಷೇತ್ರದಲ್ಲಿ ತಮ್ಮದೇ ಪ್ರಭಾವವನ್ನು ಬೀರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News