ಮಹಿಳೆಯರ 10 ಮೀ ಪಿಸ್ತೂಲ್ ಸ್ಪರ್ಧೆ ; ಫೈನಲ್ ಪ್ರವೇಶಿಸಿದ ಮನು ಭಾಕರ್

Update: 2024-07-27 12:44 GMT

ಪ್ಯಾರಿಸ್ : ಶೂಟರ್ ಮನು ಭಾಕರ್ ಒಲಿಂಪಿಕ್ಸ್ ನ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

ಭಾಕರ್ ಒಟ್ಟು 580 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಇದಕ್ಕೂ ಮುನ್ನ ಸರಬ್ಜೋತ್ ಸಿಂಗ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರು ಕ್ರಮವಾಗಿ 9 ಮತ್ತು 18ನೇ ಸ್ಥಾನ ಪಡೆದು ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು.

ಸರಬ್ಜೋತ್ ಫೈನಲ್‌ಗೆ ಅರ್ಹತೆ ಪಡೆಯುವ ಭರವಸೆ ಮೂಡಿಸಿದ್ದರು. ಆದರೆ ಅಂತಿಮ ಸ್ಥಾನವನ್ನು ಪಡೆದುಕೊಳ್ಳಲು ವಿಫಲರಾದರು. ಎರಡು ಭಾರತೀಯ ಜೋಡಿಗಳು 10 ಮೀಟರ್ ಏರ್ ರೈಫಲ್ ಮಿಶ್ರ ತಂಡ ಸ್ಪರ್ಧೆಯ ಫೈನಲ್‌ಗೆ ಪ್ರವೇಶಿಸಲು ವಿಫಲವಾದ ನಂತರ ಶೂಟರ್ ಮನು ಭಾಕರ್ ಒಲಿಂಪಿಕ್ಸ್ ನ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News