ವಿಶ್ವಕಪ್ 2023: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ತಾನ

Update: 2023-10-11 08:39 GMT

Photo: X/@cricketworldcup

ಹೊಸದಿಲ್ಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ‍್ಘಾನಿಸ್ತಾನ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ತನ್ನ ಆರಂಭಿಕ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಕ್ರಿಕೆಟ್ 2023 ಕ್ರೀಡಾಕೂಟದ ಅಭಿಯಾನವನ್ನು ಪ್ರಾರಂಭಿಸಿರುವ ಭಾರತ ತಂಡವು, ಅಫ್ಘಾನಿಸ್ತಾನ ತಂಡದ ಎದುರು ಸುಲಭ ಗೆಲುವಿನ ವಿಶ್ವಾಸದಲ್ಲಿದೆ. ತಂಡದಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿರುವ ಭಾರತವು ರವಿಚಂದ್ರನ್ ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಕಣಕ್ಕಿಳಿಯಲಿದ್ದಾರೆ.

ಮತ್ತೊಂದೆಡೆ, ಬಾಂಗ್ಲಾದೇಶದ ಎದುರಿನ ಪಂದ್ಯದಲ್ಲಿ ಸೋಲನುಭವಿಸಿರುವ ಅಫ‍್ಘಾನಿಸ್ತಾನ ತಂಡವು, ಆ ಪಂದ್ಯದಲ್ಲಿ ಎಸಗಿದ್ದ ತಪ್ಪುಗಳನ್ನು ತಿದ್ದಿಕೊಂಡು ಈ ಪಂದ್ಯದಲ್ಲಿ ಗೆಲುವು ದಾಖಲಿಸುವ ಉಮೇದಿನಲ್ಲಿದೆ.

ಅಫ‍್ಘಾನಿಸ್ತಾನ ತಂಡದೆದುರಿನ ಪಂದ್ಯಕ್ಕೂ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅಲಭ್ಯರಾಗಿದ್ದು, ಪ್ರಥಮ ಪಂದ್ಯದಲ್ಲಿ ವಿಫಲರಾಗಿದ್ದ ಇಶಾನ್ ಕಿಶನ್ ಈ ಪಂದ್ಯದಲ್ಲೂ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಪಂದ್ಯದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದ ವಿರಾಟ್ ಕೊಹ್ಲಿ ತವರಿನಲ್ಲಿ ಈ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ ಎದುರಿನ ಪಂದ್ಯದಲ್ಲಿ ಅಮೋಘ 85 ರನ್ ಸಿಡಿಸಿದ್ದ ವಿರಾಟ್ ಕೊಹ್ಲಿ ಮೇಲೆ ತವರಿನ ಕ್ರಿಕೆಟ್ ಅಭಿಮಾನಿಗಳ ಭಾರಿ ನಿರೀಕ್ಷೆ ಇದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News