ವಿಶ್ವಕಪ್: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಬಾಂಗ್ಲಾದೇಶ

Update: 2023-10-07 05:14 GMT

Photo: X/@BCBtigers

ಧರ್ಮಶಾಲಾ: ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ 2023 ಪಂದ್ಯಾವಳಿಯ ಬಾಂಗ್ಲಾದೇಶ-ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ, ಬಾಂಗ್ಲಾ ದೇಶವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಪಂದ್ಯಕ್ಕೂ ಮುನ್ನ, ಏಶ್ಯಾ ಕಪ್ ಹಾಗೂ ವಿಶ್ವಕಪ್ ಕ್ರಿಕೆಟ್ ನ ಪೂರ್ವಾಭ್ಯಾಸ ಪಂದ್ಯದಲ್ಲಿ ಇವೆರಡು ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಪಂದ್ಯಗಳಲ್ಲಿ ಬಾಂಗ್ಲಾದೇಶವು ಗೆಲುವು ಸಾಧಿಸಿತ್ತು. ಆದರೆ, ಚತ್ತೊಗ್ರಾಮ್ ನಲ್ಲಿ ಉಭಯ ತಂಡಗಳ ನಡುವೆ ನಡೆದಿದ್ದ ಸರಣಿಯಲ್ಲಿ ಅಫ್ಘಾನಿಸ್ತಾನ ತಂಡವು ಸರಣಿಯನ್ನು 2-1ರ ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News