ಬಾರ್ಡರ್-ಗವಾಸ್ಕರ್ ಟೆಸ್ಟ್ ಕ್ರಿಕೆಟ್ | ಆಸ್ಟ್ರೇಲಿಯಾದ ವಿರುದ್ಧ 150 ರನ್ ಸಿಡಿಸಿದ ಯಶಸ್ವಿ ಜೈಸ್ವಾಲ್‌

Update: 2024-11-24 05:35 GMT

Photo : ಯಶಸ್ವಿ ಜೈಸ್ವಾಲ್‌ | x/@BCCI

ಪರ್ತ್‌: ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಪ್ರಥಮ ಪಂದ್ಯದ ಮೂರನೇ ದಿನದಾಟದಲ್ಲಿ ಭಾರತದ ಯಶಸ್ವಿ ಜೈಸ್ವಾಲ್‌ 150 ರನ್ ಸಿಡಿಸಿದ್ದಾರೆ.

281 ಎಸೆತ ಎದುರಿಸಿದ ಜೈಸ್ವಾಲ್‌ 3 ಸಿಕ್ಸರ್‌ 13 ಬೌಂಡರಿಗಳ ಸಹಿತ ಆಸ್ಟ್ರೇಲಿಯಾ ನೆಲದಲ್ಲಿ ಟೀಮ್‌ ಇಂಡಿಯಾಗೆ ಭರ್ಜರಿ ಇನ್ನಿಂಗ್ಸ್‌ ಬುನಾದಿ ಹಾಕಿಕೊಟ್ಟರು. 

ಇದೇ ಪಂದ್ಯದಲ್ಲಿ ಕೆ ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್‌ ಮೊದಲ ವಿಕೆಟ್‌ಗೆ 201 ರನ್‌ಗಳ ಜೊತೆಯಾಟವಾಡಿದ್ದಾರೆ.

ಈ ಹಿಂದೆ ಆಸ್ಟ್ರೇಲಿಯಾದಲ್ಲಿ 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಸುನಿಲ್ ಗವಾಸ್ಕರ್ ಹಾಗೂ ಕೆ ಶ್ರೀಕಾಂತ್‌ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ನಿರ್ಮಿಸಿದ್ದರು. ವಿಕೆಟ್‌ಗೆ 191 ರನ್ ಕಲೆಹಾಕಿ ಅವರು ಇತಿಹಾಸ ನಿರ್ಮಿಸಿದ್ದರು.

38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

46 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಭಾರತ ತಂಡವು ಕೆಎಲ್ ರಾಹುಲ್ ಅವರ ವಿಕೆಟ್ ಕಳೆದುಕೊಂಡು 88.2 ಓವರ್‌ಗಳಿಗೆ 288 ರನ್ ಗಳಿಸಿದೆ. ವಿರಾಟ್ ಕೊಹ್ಲಿ 4 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News