ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10ರವರೆಗೂ ನೀರು: ಸಚಿವ ಆರ್.ಬಿ.ತಿಮ್ಮಾಪುರ

Update: 2023-10-12 06:52 GMT

ಬೆಂಗಳೂರು, ಅ.12: ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.

ಜಲಾಶಯಕ್ಕೆ ಒಳ ಹರಿವು ಬಂದಿರುವುದರಿಂದ ಚಾಲು-ಬಂದ್ ಪದ್ದತಿಯನ್ನು ಪರಿಷ್ಕರಿಸಿ 14 ದಿನ ನೀರು ಚಾಲು ಹಾಗೂ 10 ದಿನದ ಬದಲಿಗೆ 8 ದಿನ ಮಾತ್ರ ಬಂದ್ ಪದ್ಧತಿಯನ್ನು ಅನುಸರಿಸಿ ಅ.17ರ ಬದಲಿಗೆ ಅ.14ರಿಂದಲೇ ನೀರು ಹರಿಸಲು ತೀರ್ಮಾನಿಸಲಾಗಿದೆ. ಅಲ್ಲದೇ ಮುಂಗಾರು ಹಂಗಾಮಿಗೆ ನವೆಂಬರ್23 ರವರೆಗೂ ನೀರು ಹರಿಸಲು ಕೈಗೊಂಡಿದ್ದ ನಿರ್ಣಯದ ಬದಲಾಗಿ ಡಿಸೆಂಬರ್ 10ರವರೆಗೂ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರ್ ಬಿ ತಿಮ್ಮಾಪುರ ಮಾಹಿತಿ ನೀಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿಗಾಗಿ ನೀರು ಹರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಬಾಗಲಕೋಟೆ, ವಿಜಯಪುರ, ಕಲಬುರಗಿ,ಯಾದಗಿರಿ, ರಾಯಚೂರು ಜಿಲ್ಲೆಗಳ ಸುಮಾರು 6 ಲಕ್ಷ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News