ಮಡಿಕೇರಿ | ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿ ವಶಕ್ಕೆ
Update: 2023-11-19 15:15 GMT
ಮಡಿಕೇರಿ ನ.19 : ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬರು ಹೆಲ್ಮೆಟ್ ನಿಂದ ಹಲ್ಲೆ ಮಾಡಿರುವ ಘಟನೆ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿ.ಎ.ಗಣಪತಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಸಿಬ್ಬಂದಿ ಸಂತೋಷ್ ಚೌಹಾನ ಎಂಬುವವರು ಹಲ್ಲೆಗೊಳಗಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದಾಪುರ ಬಸ್ ನಿಲ್ದಾಣದ ಬಳಿ ಕರ್ತವ್ಯದಲ್ಲಿದ್ದ ಸಂತೋಷ್ ಚೌಹಾನ ಅವರ ಮೇಲೆ ಗುಹ್ಯ ಗ್ರಾಮದ ನಿವಾಸಿ ಸಿ.ಎ.ಗಣಪತಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಅವಾಚ್ಯ ಪದ ಬಳಸಿದ್ದಾರೆ. ಹಲ್ಲೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ವೈರಲ್ ಆಗಿತ್ತು. ಅಲ್ಲದೆ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು.