12 ಸಾವಿರ ಬಹುಮಹಡಿ ಮನೆಗಳ ನಿರ್ಮಾಣ ಕಾರ್ಯ ಆರಂಭ: ಸಚಿವ ಝಮೀರ್ ಅಹ್ಮದ್ ಖಾನ್

Update: 2023-07-10 13:36 GMT

ಬೆಂಗಳೂರು, ಜು. 10: ರಾಜೀವ್ ಗಾಂಧಿ ವಸತಿ ನಿಗಮದಡಿ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ 12,551 ಬಹುಮಹಡಿಗಳ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಸೋಮವಾರ ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ಟಿ.ಸೋಮಶೇಖರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ 2,097 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 2 ಸಾವಿರ ಮನೆಗಳ ಕಾಮಗಾರಿ ರೂಪ್ ಲೆವೆಲ್‍ನಲ್ಲಿದ್ದು, ಉಳಿದಂತೆ ವಿವಿಧ ಹಂತಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಸ್ಥಳಗಳಲ್ಲಿನ ಬಡಾವಣೆಗಳಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ಸಂಪರ್ಕ ರಸ್ತೆ ಹಾಗೂ ಹೊರ ವಿದ್ಯುದೀಕರಣ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗಿದೆ ಎಂದು ಸಚಿವರು ಉಲ್ಲೇಖಿಸಿದರು.

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News