ಗೌರಿ-ಗಣೇಶ ಹಬ್ಬ: ಕೆಎಸ್ಸಾರ್ಟಿಸಿಯಿಂದ 1200 ಹೆಚ್ಚುವರಿ ಬಸ್ ವ್ಯವಸ್ಥೆ

Update: 2023-09-11 17:53 GMT

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15, 16 ಹಾಗೂ 17ರಂದು ಮೂರು ದಿನಗಳ ಕಾಲ ಬೆಂಗಳೂರು ನಗರದಿಂದ ರಾಜ್ಯದ ವಿವಿಧೆಡೆಗೆ 1200 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ.

ನಂತರ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆ.18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ತಿರುಪತಿ, ವಿಜಯವಾಡ, ಹೈದರಾಬಾದ್ ಸಹಿತ ಇನ್ನಿತರ ಸ್ಥಳಗಳಿಗೆ ವಿಶೇಷ ವಾಹನ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗ. ತಮಿಳುನಾಡು ಮತ್ತು ಕೇರಳ ಕಡೆಗೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕ್ಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಶೇ.10ರಷ್ಟು ರಿಯಾಯಿತಿ: ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್‍ಸೈಟ್ ಮುಖಾಂತರ ಮಾಡಬಹುದು. ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ-ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News