2.50 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ

Update: 2024-01-09 07:02 GMT

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನನ್ನು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು.

1 ರಿಂದ 8 ನೇ ತರಗತಿ ವರೆಗಿನ 2,35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ., ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ನಂತೆ 3.50 ಕೋಟಿ ರೂ., ಐಐಟಿ, ಐಐಎಂ ಪ್ರವೇಶ ಪಡೆದಿರುವ 19 ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ. ನಂತೆ 38 ಲಕ್ಷ ರೂ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಸಿಗದ 3,330 ವಿದ್ಯಾರ್ಥಿಗಳಿಗೆ ತಲಾ 1,500 ರೂ. ನಂತೆ 13.50 ಕೋಟಿ ರೂ., ಬಿಡುಗಡೆ ಮಾಡಲಾಯಿತು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News