ರಾಜ್ಯದಲ್ಲಿ 173 ಕೊರೋನ ಪ್ರಕರಣ ದೃಢ, ಇಬ್ಬರ ಸಾವು

Update: 2023-12-29 16:10 GMT

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 173 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 37 ಜನರು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 8,349ಕ್ಕೆ ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 12 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 702ಕ್ಕೆ ಏರಿಕೆಯಾಗಿದೆ. ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರು ಸೋಂಕಿತರು ಬಲಿ: ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿನ ಪಾಸಿಟಿವಿಟಿ ದರ ಶೇ.2.07 ದಾಖಲಾಗಿದೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 173 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 6, ಬೆಳಗಾವಿ 1, ಬೆಂಗಳೂರು ನಗರ 82, ಚಾಮರಾಜನಗರ 4, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 13, ದಾವಣಗೆರೆ 2, ಧಾರವಾಡ 1, ಗದಗ 4, ಹಾಸನ 9, ಕಲಬುರಗಿ 1, ಕೊಡಗು 1, ಕೋಲಾರ 2, ಮಂಡ್ಯ 6, ಮೈಸೂರು 16, ರಾಮನಗರ 1, ಶಿವಮೊಗ್ಗ 4, ಉತ್ತರ ಕನ್ನಡ 2, ವಿಜಯನಗರ ಜಿಲ್ಲೆಯಲ್ಲಿ 7 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 82 ಮಂದಿಗೆ ಕೊರೋನ ಸೋಂಕು

ಬೆಂಗಳೂರು: ರಾಜಧಾನಿಯಲ್ಲಿ ಶುಕ್ರವಾರದಂದು 82 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. 2616 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 471ಕ್ಕೆ ಏರಿಕೆಯಾಗಿದೆ.

(sಅವರಡ್ಡಿ)

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News