ಅ.19 ರಿಂದ 24ರವರೆಗೆ ಚಿಕ್ಕಮಗಳೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

Update: 2023-10-18 13:45 GMT

ಚಿಕ್ಕಮಗಳೂರು, ಅ.18: ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಅ.19ರಿಂದ 24ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಮಹಿಷ ದಸರಾ ಆಚರಣೆ ಸಂಬಂಧ ಜಿಲ್ಲಾದ್ಯಂತ ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಆಳವಡಿಸುವುದು, ಪ್ರತಿಭಟನೆ, ಮೆರವಣಿಗೆ ನಡೆಸುವುದು, ಅವಹೇಳನಕಾರಿ ಘೋಷಣೆಗಳು, ಭಾಷಣಗಳು, ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಧೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಟಿಗಲೂ ಸೇರಿದಂತೆ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದ್ದು,ಮಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿಯು ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದೆಂದು ಅವರು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News