ರಾಜ್ಯದಲ್ಲಿ 2ನೇ ಹಂತದ ಮತದಾನ: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರಕಾರಿ ನೌಕರರು ಹೃದಯಾಘಾತದಿಂದ ಮೃತ್ಯು
Update: 2024-05-07 06:04 GMT
ಬೆಂಗಳೂರು: ಮಂಗಳವಾರ ಚುನಾವಣಾ ಆಯೋಗದ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರತರಾಗಿದ್ದ ಇಬ್ಬರು ಸರಕಾರಿ ನೌಕರರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಗಳನ್ನು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಿದ್ದಾಪುರ (48) ಹಾಗೂ ಕೃಷಿ ಸಹಾಯಕ ಅಧಿಕಾರಿ ಆನಂದ್ ತೆಲಂಗ್ (32) ಎಂದು ಗುರುತಿಸಲಾಗಿದೆ. ಗೋವಿಂದಪ್ಪ ಸಿದ್ದಾಪುರ ಸೋಮವಾರ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಕೊನೆಯುಸಿರೆಳೆದರೆ, ಆನಂದ್ ತೆಲಂಗ್ ಬೀದರ್ ಜಿಲ್ಲೆಯ ಕುದುಂಬಲ್ ಗ್ರಾಮದಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೆ ಹಂತದ ಲೋಕಸಭಾ ಚುನಾವಣೆ ಪ್ರಗತಿಯಲ್ಲಿದೆ.