ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ 2 ವಿಧಾನ; ಫಲಾನುಭವಿ ಯಾರು?: ಇಲ್ಲಿದೆ ಮಾಹಿತಿ

Update: 2023-07-15 07:45 GMT

ಬೆಂಗಳೂರು, ಜು.15: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ದಿನಾಂಕ ಕೊನೆಗೂ ಪ್ರಕಟವಾಗಿದ್ದು, ಇದೇ ತಿಂಗಳ 19 ರಿಂದ ಮನೆಯ ಯಜಮಾನಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ 'ಯಜಮಾನಿ ಮಹಿಳೆ' ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಲಿದ್ದಾರೆ. ಒಂದು ವೇಳೆ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ ಟಿ ಪಾವತಿ ಮಾಡುತ್ತಿದ್ದರೆ, ಅವರು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. 

ಇನ್ನು ಫಲಾನುಭವಿಯು ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ.

  • ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಮಹಿಳೆಗೂ ದಿನಾಂಕ, ಸಮಯ ಹಾಗೂ ನೊಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್ಎಂಎಸ್ (SMS) ಮೂಲಕ ತಿಳಿಸಲಾಗುವುದು. ಜತೆಗೆ, ಗ್ರಾಮಾಂತರ ಪುದೇಶದಲ್ಲಿ ವಾಸಿಸುವ ಮಹಿಳೆಯರು ಗ್ರಾಮದ ಸಮೀಪವಿರುವ ಗಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪುದೇಶದಲ್ಲಿವವರು ಕರ್ನಾಟಕ ಒನ್ ಬೆಂಗಳೂರು-ಒನ್,ಬಿಬಿಎಂಪಿ ವಾರ್ಡ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
    • ಮಹಿಳೆಯರು ಅರ್ಜಿ ಸಲ್ಲಿಸಲು ಅನುಕೂಲವಾಗಲು "ಪ್ರಜಾ ಪ್ರತಿನಿಧಿ” ಸೇವಕರನ್ನು ನಿಯೋಜಿಸಲಾಗಿದ್ದು (ಸರ್ಕಾರದಿಂದ ಗುರುತಿಸಲ್ಪಟ್ಟ, ಸ್ವಯಂಸೇವಕರು) ಅವರು ಫಲಾನುಭವಿಗಳ ಮನೆಗೆ ಭೇಟಿ ನೀಡಿ ನೊಂದಾಣಿ ಮಾಡುವ ವ್ಯವಸ್ಥೆಯೂ ಮಾಡಲಾಗಿದೆ.  
Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News