ಶಿವಮೊಗ್ಗ ರೈಲು ನಿಲ್ದಾಣದ ಬಳಿ 2 ಅನುಮಾನಾಸ್ಪದ ಬಾಕ್ಸ್‌ ಪತ್ತೆ; ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ

Update: 2023-11-05 09:57 GMT

ಶಿವಮೊಗ್ಗ, ನ. 5: ರೈಲು ನಿಲ್ದಾಣದ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಎರಡು ಬಾಕ್ಸ್ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿರುವ ಘಟನೆ ವರದಿಯಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಶನಿವಾರದಿಂದ ಎರಡು ಬಾಕ್ಸ್ ಗಳು ರೈಲು ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.

ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲ. 

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.

ಕಳೆದ ನಾಲ್ಕೈದು ದಿನಗಳಿಂದ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಅದರ ಬೆನ್ನಲ್ಲೇ ಅನಾಮಧೇಯ ಬಾಕ್ಸ್ ಪತ್ತೆಯಾಗಿದೆ.

ಇನ್ನು, ಬಾಕ್ಸ್‌ನಲ್ಲಿ ಪರಿಶೀಲನೆಗೆ ಬೆಂಗಳೂರಿನಿಂದ ವಿಶೇಷ ತಂಡ ಆಗಮಿಸಬೇಕಿದೆ. ಈ ಹಿನ್ನಲೆ ವಿಶೇಷ ತಂಡ ಆಗಮಿಸುವವರೆಗೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News