ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದ ನಂದಿನಿ ಸಂಸ್ಥೆ

Update: 2024-05-16 08:44 GMT
Photo :x/@siddaramaiah

ಬೆಂಗಳೂರು : ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆಯು ಈಗ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಶ್ಲಾಘಣೆ ವ್ಯಕ್ತಪಡಿಸಿ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ" ಎಂದು ಬರೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News