ಕೃಷಿ ಇಲಾಖೆಯಲ್ಲಿ 2 ಸಾವಿರ ಹುದ್ದೆ ಭರ್ತಿ: ಸಚಿವ ಚಲುವರಾಯಸ್ವಾಮಿ
Update: 2023-10-12 16:09 GMT
ಬೆಂಗಳೂರು, ಅ.12: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು ಎರಡು ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದರಂತೆ ಮೊದಲ ಹಂತಗಳಲ್ಲಿ ಕನಿಷ್ಟ 1000 ಹುದ್ದೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಗುರುವಾರ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರಕಾರದಲ್ಲಿ ನೇಮಕಾತಿ ನಡೆಯಲಿಲ್ಲ ರಾಜ್ಯದಲ್ಲಿ ಹೊಸ ಸರಕಾರ ಬಂದ ನಾಲ್ಕೇ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ 32 ಅಭ್ಯರ್ಥಿಗಳು ನೇಮಕಗೊಂಡಿದ್ದು ಎಲ್ಲಾರಿಗೂ ನೇಮಕಾತಿ ಆದೇಶವನ್ನು ನೀಡಲಾಗುತ್ತಿದೆ ಎಂದ ಅವರು, ಕೃಷಿ ಇಲಾಖೆಯ ಕೃಷಿ ಅಧಿಕಾರಿ,ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಕ್ರಮ ವಹಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.