ವಿಜಯಪುರದಲ್ಲಿ ಕೆನಡಾದ ವಿಟೆರಾ ಕಂಪೆನಿಯಿಂದ 250ಕೋಟಿ ರೂ.ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

Update: 2024-08-30 16:02 GMT

ಬೆಂಗಳೂರು : ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪೆನಿಯಾಗಿರುವ ವಿಟೆರಾ 250 ಕೋಟಿ ರೂ.ಮೊತ್ತದ ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದಲ್ಲಿ ವಿಟೆರಾ ಕಂಪೆನಿಯ ಪ್ರತಿನಿಧಿಗಳ ಜತೆ ಸಚಿವರು ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವಿಟೆರಾ ಕಂಪೆನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದು ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News