ಚಿಕ್ಕಮಗಳೂರು: ಟ್ರಕ್ಕಿಂಗ್ ಗೆ ಹೋಗಿದ್ದ ಯುವಕ ಹೃದಯಘಾತದಿಂದ ಮೃತ್ಯು

Update: 2023-06-30 13:32 GMT
ಮೃತ ಯುವಕ 

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ವರದಿಯಾಗಿದೆ. 

ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. 

ಶುಕ್ರವಾರ ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಪೀಕ್ ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ ಮೃತಪಟ್ಟಿದ್ದಾನೆನ್ನಲಾಗಿದೆ. 

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News